ಸಲ್ಪರ್ ಆ್ಯಸೀಡ್ ಸೋರಿಕೆ – 10ಕ್ಕೂ ಅಧಿಕ ಮಂದಿ ಅಸ್ವಸ್ಥ
ರಾಮನಗರ: ರಾಮನಗರ ಐಜೂರಿನ ಮಲ್ಲೇಶ್ವರ ಬಡಾವಣೆಯಲ್ಲಿ ವಾಟರ್ ಫಿಲ್ಟರ್ ಗೆ ಬಳಸಬೇಕಿದ್ದ ಸಲ್ಪರ್ ಆ್ಯಸೀಡ್ ಪೈಪ್ ಲೀಕ್ ಆಗಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
2004 ರಿಂದ ತುಕ್ಕು ಹಿಡಿದು ಬಿದ್ದಿದ್ದ ಪೈಪ್ ನಿಂದ ಗ್ಯಾಸ್ ಸೋರಿಕೆಯಾಗಿದ್ದು ಇದರ ಪರಿಣಾಮ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ.
ಇನ್ನು ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ತಂಡ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.