ಸಿಎಂ ನೇತೃತ್ವದಲ್ಲಿ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮಹತ್ವದ ಸಭೆ
ಬೆಂಗಳೂರು: ಪ್ರಸ್ತುತ ದೇಶದ ಕೆಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಈವರೆಗೆ 92 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ ಇಂದು ಮಧ್ಯಾಹ್ನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.
ಸಿಎಂ ಗೃಹ ಕಚೇರಿಯಲ್ಲಿ ನಡೆಯುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರು ಭಾಗವಹಿಸಲಿದ್ದು. ಅವರೊಂದಿಗೆ ಚರ್ಚೆ ನಡೆಯಲಿದೆ.
ಇನ್ನು ಸಭೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಟೆಸ್ಟ್ ಹೆಚ್ಚಳದ ಬಗ್ಗೆ, ಎಲ್ಲಾ ಔಷಧ, ಉಪಕರಣಗಳ ಖರೀದಿ ಬಗ್ಗೆ, ಔಷಧ ಉಪಕರಣಗಳ ಖರೀದಿಗೆ ಬೇಕಾದ ಹಣಕಾಸು ವ್ಯವಸ್ಥೆಯ ಬಗ್ಗೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ಸೌಲಭ್ಯಗಳ ಬಗ್ಗೆ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ RTPCRಗೆ ದರ ನಿಗದಿ ಬಗ್ಗೆ ಹಾಗೇ ಪ್ರಸ್ತುತ ಕೊರೊನಾ ಸೋಂಕಿತರ ಚಿಕಿತ್ಸಾ ಕ್ರಮಗಳ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.