ಸುಪ್ರೀಂ ಕೋರ್ಟ್‌ನಲ್ಲಿ ಇಂದು ರಾಹುಲ್ ಗಾಂಧಿ ಭವಿಷ್ಯ ನಿರ್ಧಾರ – ಕೋರ್ಟ್‌ನತ್ತ ಎಲ್ಲರ ಚಿತ್ತ
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ಇಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪು ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಜುಲೈ 7 ರಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜುಲೈ15ರಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಜತೆಗೆ ಶೀಘ್ರ ವಿಚಾರಣೆಯನ್ನು ನಡೆಸುವಂತೆ ಅಭಿಷೇಕ್ ಮನು ಸಿಂಘ್ವಿ ಸಹ ಮನವಿ ಮಾಡಿಕೊಂಡಿದ್ದರು.