Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸ್ವಾತಂತ್ರ್ಯ ನಂತರ ಎಸ್‌ಸಿ, ಎಸ್‌ಟಿ ಹೊರತುಪಡಿಸಿ ಇತರೆ ಯಾವುದೇ ಜಾತಿವಾರು ಜನಗಣತಿ ನಡೆದೇ ಇಲ್ಲ: ಕೇಂದ್ರ ಸರ್ಕಾರ

ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್‌ಟಿ) ಹೊರತುಪಡಿಸಿ ಇತರೆ ಯಾವುದೇ ಜಾತಿವಾರು ಜನಗಣತಿಯನ್ನು ನಡೆಸಿಲ್ಲ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ತಿಳಿಸಿದೆ.
ಮುಂಬರುವ ಜನಗಣತಿಯಲ್ಲಿ ಜಾತಿ ವಿವರಗಳನ್ನು ಸಂಗ್ರಹಿಸಲು ಕೆಲವು ರಾಜಕೀಯ ಪಕ್ಷಗಳು ಮತ್ತು ಕೆಲವು ಸಂಘಟನೆಗಳು ಮನವಿ ಮಾಡಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ.
ಜನಗಣತಿಯಲ್ಲಿ, ಸಂವಿಧಾನ(ಪರಿಶಿಷ್ಟ ಜಾತಿಗಳು)ದ ಆದೇಶ, 1950 ಮತ್ತು ಸಂವಿಧಾನ(ಪರಿಶಿಷ್ಟ ಪಂಗಡಗಳು) ಆದೇಶ, 1950ರ ಪ್ರಕಾರ ಪರಿಶಿಷ್ಟ ಜಾತಿಗಳು(ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಎಂದು ನಿರ್ದಿಷ್ಟವಾಗಿ ಅಧಿಸೂಚಿಸಲಾದ ಜಾತಿಗಳು ಮತ್ತು ಬುಡಕಟ್ಟುಗಳನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
‘ಸ್ವಾತಂತ್ರ್ಯದ ನಂತರ ಕೇಂದ್ರ ಸರ್ಕಾರವು ಜನಗಣತಿಯಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳನ್ನು ಹೊರತುಪಡಿಸಿ ಜಾತಿವಾರು ಜನಗಣತಿ ನಡೆಸಿಲ್ಲ’ ಎಂದು ನಿತ್ಯಾನಂದ ರೈ ಅವರು ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ.