ಸ್ವಾಮೀಜಿಯವರನ್ನು ಭೇಟಿ ಮಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ.!
ಚಿತ್ರದುರ್ಗ: ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿದರು.
ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದ ಪರಿ ಸ್ವಾಮೀಜಿ ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ ಮೇದಾರ ಗುರು ಪೀಠದ ಶ್ರೀ ಬಸವ ಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ ಶ್ರೀ ತಿಪ್ಪೇರುದ್ರ ಸ್ವಾಮೀಜಿ ಪೂಜ್ಯರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶಾಸಕರಾದ ವೀರೇಂದ್ರ ಪಪ್ಪಿ ಪಾವಗಡದ ವಿ ವೆಂಕಟೇಶ್ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ನಿಗಮದ ಅಧ್ಯಕ್ಷ ಜಿಎಸ್ ಮಂಜುನಾಥ್
ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ನೇರಲಗುಂಟೆ ರಾಮಣ್ಣ ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ಚಿಕ್ಕಂದವಾಡಿ ತಿಪ್ಪಣ್ಣ, ಬಂಡೆ ರುದ್ರಪ್ಪ ಈ ಮಂಜುನಾಥ , ಹಿರಿಯೂರು ಕೃಷ್ಣಮೂರ್ತಿ ಈಶ್ವರಪ್ಪ ಚಳ್ಳಕೆರೆ ತಿಪ್ಪೇಸ್ವಾಮಿ ದಾವಣಗೆರೆ ಶ್ರೀಮತಿ ಉಮಾ ಕುಮಾರ್ ಉಪಸ್ಥಿತರಿದ್ದರು.