ಹಗರಿಬೊಮ್ಮನಹಳ್ಳಿ: ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಹೊಸಪೇಟೆ: ಹಗರಿಬೊಮ್ಮನಹಳ್ಳಿ ಪರಸಭೆಯಿಂದ 2023-24ನೇ ಸಾಲಿನ ಎಸ್.ಎಫ್.ಸಿ ಅನುದಾನದ ಶೇ.24.10 ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯಗಳ ವಿವರ: ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಧನ, ಬಿ.ಇ., ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ಸಹಾಯ ಧನ ಹಾಗೂ ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ ಮಟ್ಟದಲ್ಲಿ ಸಾಂಸ್ಕೃತಿಕ, ಕ್ರೀಡೆ, ಕಲೆ ಮತ್ತು ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ. ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಧನ ನೀಡಲಾಗುತ್ತಿದೆ.
ಅರ್ಹ ಆಸಕ್ತ ವಿದ್ಯಾರ್ಥಿಗಳು ಜಾತಿ & ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಶಿಕ್ಷಣಕ್ಕೆ ಸಂಬAಧಿಸಿದAತೆ ಪ್ರಸಕ್ತ ಸಾಲಿನ ವ್ಯಾಸಂಗ ಪ್ರಮಾಣ ಪತ್ರ, ಪ್ರವೇಶಾತಿ ಪಡೆದ ರಶೀದಿ ಪ್ರತಿ, ಅಂಕಪಟ್ಟಿಗಳು, ಇತ್ತೀಚಿನ ನಾಲ್ಕು ಪಾಸ್ ಪೋಟ್ ಅಳತೆಯ ಭಾವಚಿತ್ರಗಳು, ಸಾಂಸ್ಕೃತಿಕ, ಕ್ರೀಡೆ, ಕಲೆ ಮತ್ತು ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸಂಬAಧಿಸಿದ ಶಾಲಾ-ಕಾಲೇಜಿನಿಂದ ಭಾಗವಹಿಸಿದ ಬಗ್ಗೆ ಆದೇಶ ಪತ್ರ, ಯಾವ ಚಟುವಟಿಕೆಯಲ್ಲಿ ಭಾಗವಹಿಸಿದ ಬಗ್ಗೆ ಪ್ರಮಾಣ ಪತ್ರದೊಂದಿಗೆ ಡಿಸೆಂಬರ್ 08 ರೊಳಗಾಗಿ ಪುರಸಭೆ ಕಾರ್ಯಾಲಯಕ್ಕೆ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಹಗರಿಬೊಮ್ಮನಹಳ್ಳಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.