ಹಾನಗಲ್ ಪ್ರಕರಣ : ‘ದುಡ್ಡಿನ ಅಮೀಷವೊಡ್ಡಿ ಮುಚ್ಚಿ ಹಾಕಲು ಯತ್ನ’ – ಬೊಮ್ಮಾಯಿ ಆರೋಪ
ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ನಡೆದ ನೈತಿಕ ಪೊಲಿಸ್ ಗಿರಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾನಗಲ್ ಪ್ರಕರಣವನ್ನು ಅಲ್ಲಿನ ಪೊಲೀಸರು ಸಂತ್ರಸ್ತರಿಗೆ ದುಡ್ಡಿನ ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ನಾಳೆ ಹಾವೇರಿಗೆ ಭೇಟಿ ನೀಡುತ್ತಿದ್ದು, ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ಘೋಷಿಸುತ್ತಾರೆ ಅನ್ನುವ ನಿರೀಕ್ಷೆಯಲ್ಲಿದ್ದೇವೆ ಎಂದರು.
ತನಿಖೆ ನೆಪದಲ್ಲಿ ಸಂತ್ರಸ್ಥೆಯನ್ನು ಶಿರಸಿಗೆ ಕರೆದೊಯ್ಯಲಾಗುತ್ತಿದೆ. ಬಿಜೆಪಿ ಮಹಿಳಾ ನಿಯೋಗ ಅಲ್ಲಿಗೆ ಭೇಟಿ ಕೊಡುತ್ತಿದೆ ಅಂತ ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.