Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಿಮಾಚಲ ಪ್ರದೇಶದಲ್ಲಿ ವಿಪರೀತ ಮಳೆ- 71 ಮಂದಿ ಮೃತ್ಯು, 7.5 ಸಾವಿರ ಕೋಟಿ ನಷ್ಟ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಸುರಿಯುತಿರುವ ಮಳೆಯಿಂದಾಗಿ 71 ಜನರು ಮೃತಪಟ್ಟಿದ್ದು, ರಾಜ್ಯಾದ್ಯಂತ ಮಳೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ವಿಪತ್ತು ನಿರ್ವಹಣಾ ಪ್ರಧಾನ ಕಾರ್ಯದರ್ಶಿ ಓಂಕಾರ್ ಚಂದ್ ಶರ್ಮಾ, ಜುಲೈಗಿಂತ ಆಗಸ್ಟ್ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ 71 ಮಂದಿ ಸಾವನ್ನಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದರು.

ಇನ್ನು ಸುಮಾರು 2,500 ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದ್ದು, ಜಿಲ್ಲಾಧಿಕಾರಿಗಳು, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಸ್ಥಳೀಯ ಜನರು ಸೇರಿದಂತೆ ಸ್ಥಳಾಂತರ ಕಾರ್ಯವನ್ನು ಬೃಹತ್ ಪ್ರಮಾಣದಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.