Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ನಿಧನ.!

 

ಚಿಕ್ಕಮಗಳೂರು:  ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ(87) ಸೋಮವಾರ ಮಧ್ಯರಾತ್ರಿ ದಾರದಹಳ್ಳಿಯ ತಮ್ಮ ನಿವಾಸ ‘ಪೂರ್ಣಚಂದ್ರ’ದಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾದರು.

ಪತ್ನಿ ಪೂರ್ಣಿಮಾ, ನಾಲ್ವರು ಪುತ್ರಿಯರಿದ್ದಾರೆ. ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.