Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನ್‌ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನ್‌ಗೆ ತೀವ್ರ ಹೃದಯಾಘಾತವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನಡ ಸಿನಿಮಾ,ಟಿವಿ ಗಳಲ್ಲಿ ಹಾಸ್ಯನಟನಾಗಿ ಗುರುತಿಸಿಕೊಂಡಿದ್ದ ಜನಾರ್ಧನ್‌ಗೆ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದ್ದು ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಾಳೆ ಇವರಿಗೆ ಆಂಜಿಯೋಗ್ರಾಂ ಆಪರೇಷನ್‌ ಮಾಡುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ.