Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹುಬ್ಬಳ್ಳಿಯಲ್ಲಿ ಭಾರಿ ಮನೆ ದರೋಡೆ- ಮನೆಯವರನ್ನು ಕಟ್ಟಿ ಹಾಕಿ ಕೋಟ್ಯಾಂತರ ಮೌಲ್ಯದ ನಗದು, ಚಿನ್ನಾಭರಣ ಲೂಟಿ.!

ದರೋಡೆಕೋರರ ಗುಂಪೊಂದು ಮನೆಯವರನ್ನು ಕಟ್ಟಿಹಾಕಿ ಕೋಟ್ಯಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಹುಬ್ಬಳ್ಳಿಯ ಬಸವೇಶ್ವರ ನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ದರೋಡೆಕೋರರ ಗುಂಪೊಂದು ಮನೆಯವರನ್ನು ಕಟ್ಟಿಹಾಕಿ ಕೋಟ್ಯಾಂತರ ರೂ. ಮೌಲ್ಯದ ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಹುಬ್ಬಳ್ಳಿಯ ಬಸವೇಶ್ವರ ನಗರದಲ್ಲಿ ನಡೆದಿದೆ.

ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ನಿರತರಾಗಿರುವುದನ್ನು ಅರಿತು ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್‍ನಲ್ಲಿರುವ ವಿದ್ಯಾಮಂದಿರ ಬುಕ್ ಡಿಪೋ ಮಾಲಿಕರಾದ ಉಲ್ಲಾಸ ದೊಡ್ಡಮನಿ ಎಂಬುವವರ ಮನೆಗೆ ತಡರಾತ್ರಿ ಕಿಟಕಿಯ ಕಬ್ಬಿಣದ ಗ್ರಿಲ್ ತುಂಡರಿಸಿ ನುಗ್ಗಿದ್ದ ದರೋಡೆಕೋರರು ಮಲಗಿದ್ದವರ ಕೈಕಾಲು ಕಟ್ಟಿಹಾಕಿದೆ.

ನಂತರ ಮನೆಯ ಕಪಾಟಿನಲ್ಲಿದ್ದ ಸುಮಾರು ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಎತ್ತಿಕೊಂಡು ಪರಾರಿಯಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗೋಕುಲ ರೋಡ ಠಾಣೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದರೋಡೆಕೋರರ ಬಂಧನಕ್ಕೆ ಬಲೆ ಬೀಸಲಾಗಿದೆ.