ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರ
ಹೆತ್ತ ತಾಯಿಯನ್ನೇ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿರುವ ಹೃದಯ ವಿದ್ರಾವಕ ಘಟನೆ ಒಡಿಶಾದಲ್ಲಿ ನಡೆದಿದೆ.
ಒಡಿಶಾದ ಕಿಯೊಂಜರ್ ಜಿಲ್ಲೆಯ ಸರಸಪಾಸಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. 70 ವರ್ಷದ ವೃದ್ಧೆ ತನ್ನ ಕಿರಿಯ ಮಗನ ಜಮೀನಿನಲ್ಲಿ ಬೆಳೆಯಲಾಗಿದ್ದ ತರಕಾರಿಯನ್ನು ಕೊಯ್ದು ಮನೆಯಲ್ಲಿ ಅಡುಗೆ ಮಾಡಿದ್ದಳು. ಈ ವಿಚಾರ ಗೊತ್ತಾಗ್ತಿದ್ದಂತೆಯೇ ಆಕೆಗೆ ಈ ಶಿಕ್ಷೆ ನೀಡಿದ್ದಾನೆ ಪಾಪಿ ಮಗ. ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿ ಬಸುದೇವಪುರ್ ಕಮ್ಯುನಿಟಿ ಹೆಲ್ತ್ ಸೆಂಟರ್ಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು, ಪಾಪಿ ಪುತ್ರನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆತನ ಮೇಲೆ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.