Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ- ಕ್ರೇನ್ ಕುಸಿದು 16 ಕಾರ್ಮಿಕರು ಸಾವು

ಮಹಾರಾಷ್ಟ:ಥಾಣೆಯ ಶಹಾಪುರದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸೋಮವಾರ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಥಾಣೆಯ ಸರ್ಲಾಂಬೆ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ. ಮೃತರ ಹೊರತಾಗಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಕೂಡ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಚರಣೆ ನಡೆಯುತ್ತಿದೆ..

ಪೊಲೀಸ್ ಸಿಬ್ಬಂದಿ, ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.