ಹೊಸದಾಗಿ ಆರಂಭವಾಗುತ್ತಿರುವ ಅಶ್ವಮೇಧ ಕ್ಲಾಸಿಕ್ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ
ಬೆಂಗಳೂರು: ಅಶ್ವಮೇಧ ಕ್ಲಾಸಿಕ್ ಬಸ್ಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊಸದಾಗಿ ಆರಂಭಿಸುತ್ತಿದ್ದು, ಈ ಅಶ್ವಮೇಧ ಬಸ್ಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ.
ಅಶ್ವಮೇಧ ಕ್ಲಾಸಿಕ್ ಬಸ್ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್ಪ್ರೆಸ್ ಬಸ್ಸುಗಳಾಗಿವೆ ಹಾಗೂ ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು.ಅದರಂತೆ, ಇದೀಗ ಅಶ್ವಮೇಧ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.