Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ

 

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬಸವಾಪಟ್ಟಣ ಹೋಬಳಿಯ ದೊಡ್ಡಘಟ್ಟ ಗ್ರಾಮಕ್ಕೆ  ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಈ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸಬೇಕು.

ಹೊಸ ನ್ಯಾಯಬೆಲೆ ಅಂಗಡಿಗೆ 35-ಅಂತ್ಯೋದಯ, 330-ಬಿಪಿಎಲ್(ಅಕ್ಷಯ), ಎಪಿಎಲ್-4 ಸೇರಿದಂತೆ ಅಂದಾಜು ಒಟ್ಟು 369 ಪಡಿತರ ಚೀಟಿಗಳನ್ನು ನಿಯೋಜಿಸುವ ಉದ್ದೇಶ ಹೊಂದಲಾಗಿದೆ.

ಅರ್ಜಿಯನ್ನು ಜಂಟಿ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸತಕ್ಕದ್ದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿ ಅಥವಾ ತಹಶೀಲ್ದಾರ್ ಚನ್ನಗಿರಿ ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.