ಹೊಸ ರೇಷನ್ ಕಾರ್ಡ್: ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಹಾಕಿದವರಿಗೆ ಈಗ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ.
ಅರ್ಹರಿಗೆ ರೇಷನ್ ಕಾರ್ಡ್ ವಿತರಿಸುವುದಾಗಿ ಸರ್ಕಾರ ಘೋಷಿಸಿದೆ. ಇದೇ ತಿಂಗಳಲ್ಲೇ ಮೊದಲ ಕಂತಿನಲ್ಲಿ ಸುಮಾರು 20 ಸಾವಿರದಷ್ಟು ರೇಷನ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದ್ದು, ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ ಎಂದು ಸಚಿವ ಮುನಿಯಪ್ಪ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.