Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಂಚೆ ಕಚೇರಿಗೆ ಬರುವ ಪತ್ರ, ಕೋರಿಯರ್ ಗಳನ್ನು ತೆರೆದು ನೋಡಲು ಸರ್ಕಾರಿ ಅಧಿಕಾರಿಗಳಿಗೆ ಅವಕಾಶ

ನವದೆಹಲಿ: ದೇಶದಲ್ಲಿ ಅಂಚೆ ಕಚೇರಿಗೆ ಬರುವ ಪತ್ರಗಳನ್ನು ಇನ್ನುಮುಂದೆ ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ.

ದೇಶದ ಭದ್ರತೆಯ ದೃಷ್ಟಿಯಿಂದ ಈ ಮಸೂದೆಗೆ ಒಪ್ಪಿಗೆಯನ್ನು ನೀಡಲಾಗಿದ್ದು ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್ ಗಳನ್ನೂ ಈ ಮಸೂದೆ ವ್ಯಾಪ್ತಿಗೆ ತರಲಾಗಿದೆ.

ಈ ಮಸೂದೆ ಪ್ರಕಾರ ಕೊರಿಯರ್ ಕಚೇರಿಗೆ ಬರುವ ಶಂಕಾಸ್ಪದ ಪತ್ರಗಳನ್ನು ಅಥವಾ ಯಾವುದೇ ವಸ್ತುಗಳನ್ನು ತೆರೆದು ನೋಡಿ ಮುಟ್ಟುಗೋಲು ಹಾಕುವ ಅಧಿಕಾರ ಇದೀಗ ಸರ್ಕಾರಕ್ಕೆ ದೊರಕಿದ್ದು, ಈ ಹೊಸ ಕಾಯ್ದೆ 125 ವರ್ಷಗಳಷ್ಟು ಹಳೆಯ ಅಂಚೆ ಕಚೇರಿ ಕಾಯ್ದೆಯನ್ನು ಬದಲಿಸಿದೆ.

ಈ ಮಸೂದೆಗೆ ರಾಜ್ಯಸಭೆಯಲ್ಲಿ ಡಿಸೆಂಬರ್ 4 ರಂದೇ ಅಂಗೀಕಾರ ದೊರೆತಿದ್ದು ಸಂಸತ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು ಗದ್ದಲ ನಡೆಸಿದ ಸಂದರ್ಭದಲ್ಲಿಯೇ ಈ ಮಸೂದೆಯನ್ನು ಅಂಗೀಕರಿಸಲಾಗಿದೆ.