Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಟಲ್ ಸುರಂಗದ ಬಳಿ ಭಾರೀ ಹಿಮಾಪಾತ- 300 ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ

ಶಿಮ್ಲಾ:ಹಿಮಾಚಲ ಪ್ರದೇಶದ ರೋಹ್ಟಾಂಗ್ ನ ಅಟಲ್ ಸುರಂಗದ ದಕ್ಷಿಣ ಪೋರ್ಟಲ್ ಬಳಿ ಭಾರೀ ಹಿಮಾಪಾತ ಸಂಭವಿಸಿದ್ದು, ಹಿಮದಡಿಯಲ್ಲಿ ಸಿಲುಕಿದ್ದ ಸುಮಾರು 300 ಪ್ರವಾಸಿಗರನ್ನು ಹಿಮಾಚಲ ಪ್ರದೇಶ ಪೊಲೀಸರು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಎಟಿಆರ್ನ ಸೌತ್ ಪೋರ್ಟಲ್ ಬಳಿ ಸುಮಾರು 50 ಪ್ರವಾಸಿಗರ ವಾಹನಗಳು ಮತ್ತು ಒಂದು ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ ಸೇರಿದ ಬಸ್ ಹಿಮಪಾತದಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಅಲ್ಲಿದ್ದ ಎಲ್ಲಾ ಪ್ರವಾಸಿಗರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಕುಲು ಎಸ್ಪಿ ಸಾಕ್ಷಿ ವರ್ಮಾ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 3 ರವರೆಗೆ ಹಿಮಾಚಲ ಪ್ರದೇಶದ ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತ ಮತ್ತು ಮಳೆಯಾಗುವ ಸಾಧ್ಯತೆಯಿರಲಿದೆ.

ಅಲ್ಲದೆ, ರಾಜ್ಯದ ಕೆಳಗಿನ ಗುಡ್ಡಗಾಡು ಮತ್ತು ಬಯಲು ಪ್ರದೇಶಗಳಲ್ಲಿ ಸಾಂದರ್ಭಿಕ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಲಕ್ಷಣಗಳು ಇರಲಿದೆ. ಅಷ್ಟು ಮಾತ್ರವಲ್ಲದೆ ಬೆಟ್ಟದ ಮಧ್ಯಭಾಗದ ಪ್ರದೇಶಗಳಲ್ಲಿ ಬಿರುಸಿನ ಗಾಳಿ ಬೀಸಲಿದೆ.

ಈ ಅವಧಿಯಲ್ಲಿ ಸರಾಸರಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿರುವ ಸಾಧ್ಯತೆಯಿದೆ. ಆದರೆ ಕೆಳಗಿನ ಬೆಟ್ಟಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯ ಮತ್ತು ಮಧ್ಯ ಮತ್ತು ಎತ್ತರದ ಬೆಟ್ಟಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.