Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಪ್ರೆಂಟಿಸ್ ತರಬೇತಿಗೆ ಪರಿಶಿಷ್ಟ ಜಾತಿ ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

 

ದಾವಣಗೆರೆ : ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024 ರ ಜನವರಿಯಿಂದ ಡಿಸೆಂಬರ್ ಅವಧಿಯ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಯನ್ನು ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.  ಆಯ್ಕೆಯಾದ ಅಭ್ಯರ್ಥಿಗೆ ಮಾಹೆಯಾನ 15 ಸಾವಿರ ರೂ. ಗಳ ಶಿಷ್ಯವೇತನ ನೀಡಲಾಗುವುದು.  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ, ಸುದ್ದಿ ಸಂಗ್ರಹ ಮತ್ತು ರಚನೆ ಕುರಿತಂತೆ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.  ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾμÉ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರಬೇಕು.  ವಯೋಮಿತಿಯು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 35 ವರ್ಷದೊಳಗಿರಬೇಕು.  ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ.  ಇಲಾಖೆಯಲ್ಲಿ ಈ ಹಿಂದೆ ತರಬೇತಿ ಪಡೆದವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ. ನಿಗಧಿತ ಅವಧಿಯ ನಂತರ ಬಂದ ಅರ್ಜಿಯನ್ನು ತಿರಸ್ಕರಿಸಲಾಗುವುದು.

ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‍ಪೆÇೀರ್ಟ್ ಅಳತೆಯ 2 ಭಾವಚಿತ್ರ, ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದೇವರಾಜ ಅರಸ್ ಕಾಲೋನಿ, ದಾವಣಗೆರೆ ಇವರಿಗೆ ಸಲ್ಲಿಸಬೇಕು.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಇದೇ ಕಚೇರಿಯ 08192-254892 ದೂರವಾಣಿಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕ ಧನಂಜಯ. ಬಿ  ತಿಳಿಸಿದ್ದಾರೆ.