Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಮೆರಿಕ: ಮನೆಯಲ್ಲಿ ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ..!

ಅಮೆರಿಕ:  ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ.

ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್​ ರೂಮ್​ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು.

ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು. ಬಾತ್​ರೂಮ್​ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್​ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸದ್ಯದ ಮಾಹಿತಿ.