Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಯೋಧ್ಯೆ ರಾಮಮಂದಿರದ ಕುರಿತು ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರ

ನವದೆಹಲಿ: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮ ಅದ್ದೂರಿಯಾಗಿ ಕಳೆದ ವಾರ ನಡೆದಿದ್ದುಇದನ್ನು ವಿಶ್ವದ ಗಮನ ಸೆಳೆದಿತ್ತು.

ಆದರೆ ಇದೀಗ ಭಾರತೀಯರ ಸಂತೋಷವನ್ನು ಸಹಿಸದ ಪಾಕಿಸ್ತಾನವು ಹೊಸ ವರಸೆ ಶುರು ಮಾಡಿದೆ. ಈಗಾಗಲೇ ಅಯೋಧ್ಯೆಯಲ್ಲಿ ದಶಕಗಳ ನಂತರ ದೇವಾಲಯ ಮತ್ತು ಮಸೀದಿಯ ವಿವಾದವು ಅಂತ್ಯಗೊಂಡು ದೇವಾಲಯ ನಿರ್ಮಾಣವಾಗಿದೆ. ಇತ್ತ ಪಾಕಿಸ್ತಾನವು ಮಂದಿರದ ಬಗ್ಗೆ ದೂರು ನೀಡಲು ವಿಶ್ವಸಂಸ್ಥೆಗೆ (UN) ಪತ್ರ ಬರೆದಿದೆ.

ವಿಶ್ವಸಂಸ್ಥೆಗೆ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಅತೃಪ್ತಿ ಹೊಂದಿದ್ದು, ಅದರ ಬಗ್ಗೆ ದೂರು ನೀಡಲು ಔಪಚಾರಿಕವಾಗಿ ವಿಶ್ವಸಂಸ್ಥೆಗೆ ಪತ್ರ ಬರೆದಿದ್ದಾರೆ.

ವಿಶ್ವಸಂಸ್ಥೆಗೆ ಕಳುಹಿಸಿದ ಪತ್ರದಲ್ಲಿ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಮ್, ಭಾರತದ ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಪ್ರತಿಷ್ಠಾಪನೆಯನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಎಂದು ಬರೆದಿದ್ದಾರೆ.

ಭಾರತೀಯ ಮುಸ್ಲಿಮರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಯೋಗಕ್ಷೇಮಕ್ಕೆ ಮತ್ತು ಈ ಪ್ರದೇಶದಲ್ಲಿ ಸಾಮರಸ್ಯ ಮತ್ತು ಶಾಂತಿಗೆ ಗಂಭೀರ ಅಪಾಯವನ್ನು ಉಂಟುಮಾಡುತ್ತದೆ. ಭಾರತದಲ್ಲಿ ಇಸ್ಲಾಮಿಕ್ ಪಾರಂಪರಿಕ ತಾಣಗಳ ರಕ್ಷಣೆಗೆ ತುರ್ತು ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.