Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಒಣಕೊಬ್ಬರಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನ

ಅಡುಗೆಯಲ್ಲಿ ಹಸಿ ತೆಂಗಿನಕಾಯಿ ಬಳಕೆ ಅತ್ಯುತ್ತಮ ಎಂದು ಹಿರಿಯರು ಹೇಳುತ್ತಾರೆ. ಆದರೆ ನಿಮಗೆ ಗೊತ್ತಾ ಒಣ ಕೊಬ್ಬರಿಯಲ್ಲೂ ಆರೋಗ್ಯಕ್ಕೆ ಬೇಕಾಗುವ ಹಲವು ಅಂಶಗಳಿವೆ.

ಮನೆಯಲ್ಲಿ ಹಿರಿಯರು ಇದ್ದರೆ ಹೆಚ್ಚಾಗಿ ಹಸಿ ತೆಂಗಿನಕಾಯಿ ಅಥವಾ ಒಣಕೊಬ್ಬರಿ ಯನ್ನು ಬೆಲ್ಲದ ಜತೆ ತಿನ್ನಲು ಸಲಹೆ ನೀಡುತ್ತಾರೆ. ಯಾಕೆಂದರೆ ಅವರು ಒಣಕೊಬ್ಬರಿಯಲ್ಲಿರುವ ಉತ್ತಮ ಅಂಶಗಳ ಬಗ್ಗೆ ತಿಳಿದಿದ್ದಾರೆ. ಒಣ ಕೊಬ್ಬರಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್, ನಾರಿನಾಂಶ, ಕಾಪರ್, ಸೆಲೇನಿಯಂ ಎನ್ನುವ ಪೋಷಕಾಂಶಗಳಿವೆ. ಇದು ಆರೋಗ್ಯ ವರ್ಧನೆಗೆ ನೆರವಾಗುತ್ತದೆ. ಪೈಲ್ಸ್ ಅಥವಾ ಮೂಲವ್ಯಾಧಿ ಸಮಸ್ಯೆಗೆ ಕೂಡಾ ಒಣಕೊಬ್ಬರಿ ಒಳ್ಳೆಯ ಔಷಧಿ. ಕೊಬ್ಬರಿಯನ್ನು ಮೂಲವ್ಯಾಧಿ ಇರುವವರು ಸೇವಿಸುವುದರಿಂದ ಮೂಲವ್ಯಾಧಿ ಸಮಸ್ಯೆ ಸರಿಹೋಗುತ್ತದೆ. ಒಣ ಕೊಬ್ಬರಿಯಲ್ಲಿ ಹೇರಳವಾದ ನಾರಿನ ಅಂಶವಿರುವುದರಿಂದ ಇದು ಮಲಬದ್ಧತೆಯ ಸಮಸ್ಯೆಯನ್ನು ಕೂಡಾ ಸರಿಪಡಿಸುತ್ತದೆ.

ಹೊಟ್ಟೆಯ ಹುಣ್ಣು ಸಮಸ್ಯೆಯಿಂದ ಬಳಲುತ್ತಿರುವವರಿಗೆ ಒಣ ಕೊಬ್ಬರಿ ತುಂಬಾ ಸಹಕಾರಿ. ಇದು ಹೃದಯ ಸಂಬಂಧಿ ಕಾಯಿಲೆಗಳನ್ನು ನಿವಾರಿಸುತ್ತದೆ. ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ಕರಗಿಸುತ್ತದೆ. ರಕ್ತಹೀನತೆಯ ಸಮಸ್ಯೆಗೆ ಒಣ ಕೊಬ್ಬರಿ ರಾಮಬಾಣ. ಮಹಿಳೆಯರಲ್ಲಿ ಸಾಮಾನ್ಯವಾಗಿ ರಕ್ತಹೀನತೆಯ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತದೆ. ರಕ್ತಹೀನತೆಯ ಸಮಸ್ಯೆ ಹೆಚ್ಚಾದರೆ ಶರೀರದಲ್ಲಿ ಶಕ್ತಿಯಿರುವುದಿಲ್ಲ, ತಲೆಸುತ್ತು, ಆಯಾಸ ಮೊದಲಾದ ತೊಂದರೆ ಎದುರಾಗುತ್ತದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಒಣಕೊಬ್ಬರಿಯ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು. ಏಕೆಂದರೆ ಒಣ ಕೊಬ್ಬರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣ ಅಂಶವಿದೆ. ಇದು ಶರೀರದಲ್ಲಿ ರಕ್ತವನ್ನು ಹೆಚ್ಚು ಮಾಡುತ್ತದೆ.

ಒಣ ಕೊಬ್ಬರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ. ಒಣಗಿದ ಕೊಬ್ಬರಿ ಮೆದುಳಿನ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ಮೆದುಳನ್ನು ಉತ್ತೇಜಿಸುತ್ತದೆ ಎಂದು ತಿಳಿದುಬಂದಿದೆ. ಒಣಕೊಬ್ಬರಿ ಸೇವಿಸುವುದರಿಂದ ದೇಹದ ಮೂಳೆಗಳು ಬಲಶಾಲಿಯಾಗುತ್ತವೆ. ಕೊಬ್ಬರಿ ಸೇವನೆ ನಮ್ಮ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಮೂಳೆಗಳ ಅಂಗಾಂಶಗಳಲ್ಲಿ ಕಣಜ ಅಂಶಗಳು ಹೆಚ್ಚಾಗಿ ಇರುತ್ತದೆ. ಇದು ದೇಹದಲ್ಲಿ ಕಡಿಮೆಯಾದರೆ ದೇಹದ ಯಾವುದೇ ಭಾಗಕ್ಕೂ ತೊಂದರೆಯಾಗಬಹುದು. ಕೊಬ್ಬರಿ ಸೇವನೆ ಮಾಡುವುದರಿಂದ ಇಂಥಹಾ ಸಮಸ್ಯೆ ಎದುರಾಗುವುದಿಲ್ಲ. ‌ಒಣ ಕೊಬ್ಬರಿಯ ಸೇವನೆಯಿಂದ ಮೂಳೆಗಳಲ್ಲಿನ ಖನಿಜಾಂಶ ಹೆಚ್ಚಾಗುತ್ತದೆ.

ಒಣ ಕೊಬ್ಬರಿಯಿಂದ ದೊರೆಯುವ ಈ ಮಿನರಲ್ ದೇಹಕ್ಕೆ ಬೇಗನೆ ಸೇರಿಬಿಡುತ್ತದೆ. ಇದರಿಂದಾಗಿ ಆರ್ಥರೈಟಿಸ್‌ನಂತಹ ತೊಂದರೆಯಿಂದ ಪಾರಾಗಬಹುದು. ಒಣ ಕೊಬ್ಬರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ಮತ್ತು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಬಲಪಡಿಸಲು ಸಾಧ್ಯವಾಗುತ್ತದೆ. ಸೆಲೆನಿಯಮ್ ಸೆಲೆನೊಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ, ಅದು ಅನೇಕ ರೋಗಗಳು ಆವರಿಸುವ ಸಾಧ್ಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.