Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗ: ಹತೋಟಿಗೆ ಕೃಷಿ ಇಲಾಖೆ ಸಲಹೆ ಇದು.!

 

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಗುಡ್ಡದರಂಗವ್ವನಹಳ್ಳಿ ಗ್ರಾಮಕ್ಕೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ರೈತ ಸಂಜೀವಿನಿ ವಾಹನವು ಈಚೆಗೆ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದ ಸಂದರ್ಭದಲ್ಲಿ ಆಸ್ಕೋ ಕೈಟಾ ಅಂಗಮಾರಿ ರೋಗ ಕಂಡುಬಂದಿರುತ್ತದೆ.

ಜಿಲ್ಲೆಯಲ್ಲಿ ಪ್ರಸ್ತುತ ಕಡಲೆ ಬೆಳೆ ಬೆಳವಣಿಗೆಯಿಂದ ಹೂವಾಡುವ ಹಂತದಲ್ಲಿರುತ್ತದೆ. ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗವು ಗುಡ್ಡದ ರಂಗವ್ವನಹಳ್ಳಿ ಗ್ರಾಮ, ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಚಿತ್ರದುರ್ಗ ತಾಲ್ಲೂಕಿನಲ್ಲಿ ಕೂಡ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇರುತ್ತದೆ.

ಆಸ್ಕೋ ಕೈಟಾ ಅಂಗಮಾರಿ ರೋಗದ ಹತೋಟಿಗೆ ಮ್ಯಾಂಕೋಜೆಬ್ 2 ಗ್ರಾಂ  ಪ್ರತಿ ಲೀಟರ್‍ಗೆ ಅಥವಾ  ಸಾಫ್ 2 ಗ್ರಾಂ ಪ್ರತಿ ಲೀಟರ್‍ಗೆ ಅಥವಾ ಕಾರ್ಬನ್‍ಡೈಜಿಯಂ 2 ಗ್ರಾಂ ಪ್ರತಿ ಲೀಟರ್‍ಗೆ ಬೆರೆಸಿ ಸಂಪಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ನಿರ್ದೇಶಕರು (ವಿಷಯ ತಜ್ಞರು) ರೈತರಿಗೆ ಸಲಹೆ ನೀಡಿದ್ದಾರೆ.