Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕನ್ನಡ ನಾಮಫಲಕ ಕಡ್ಡಾಯಕ್ಕೆ ಇಂದೇ ಡೆಡ್‌ಲೈನ್‌

ಕನ್ನಡ ಕಡ್ಡಾಯ ನಾಮಫಲಕ ಅಳವಡಿಕೆಗೆ ನೀಡಿದ್ದ ಡೆಡ್‌ಲೈನ್‌  ಇವತ್ತು ಮುಗಿಯುತ್ತದೆ. ಹೊಸ ಕಾಯ್ದೆ ಬಂದಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವ್ಯಾಪಾರಸ್ಗರು- ಉದ್ದಿಮೆಗಳು ಹಳೇ ನಾಮಫಲಕ ತೆಗೆದು ಹೊಸ ನಾಮಫಲಕ ಹಾಕಿದ್ದಾರೆ.

ಕರ್ನಾಟಕದಲ್ಲಿ ಕನ್ನಡವನ್ನು ನಿರ್ಲಕ್ಷಿಸುತ್ತಿರುವ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪರಿಣಾಮವಾಗಿ, ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ-2024 ವಿಧೇಯಕವನ್ನು ಮಂಡಿಸಿ ಅದು ಈಗ ರಾಜ್ಯಪಾಲರ
ಅಂಕಿತದೊಂದಿಗೆ ಕಾನೂನು ಆಗಿ ಜಾರಿಯಾಗಿದೆ.