Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಂಗ್ರೆಸ್ ಪಕ್ಷಕ್ಕೆ 1,700 ಕೋಟಿ ರೂ ಮೊತ್ತಕ್ಕೆ ನೋಟೀಸ್ ನೀಡಿದ ಐಟಿ

ನವದೆಹಲಿ: ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದೆ.

2017-18ರಿಂದ 2020-21ರ ಅಸೆಸ್ಮೆಂಟ್ ವರ್ಷಕ್ಕೆ ಬಾಕಿ ಉಳಿದಿರುವ ಆದಾಯ ತೆರಿಗೆ ಹಣ, ಅದಕ್ಕೆ ಬಡ್ಡಿ, ದಂಡ ಸೇರಿ ಒಟ್ಟು 1,700 ಕೋಟಿ ರೂ. ಬಾಕಿ ಉಳಿದಿದೆ ಎಂದು ಈ ನೋಟೀಸ್​ನಲ್ಲಿ ಐಟಿ ಇಲಾಖೆ ಹೇಳಿದೆ.

ಟ್ಯಾಕ್ಸ್ ನೋಟೀಸ್​ಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿನ್ನೆ ಗುರುವಾರ ತಿರಸ್ಕರಿಸಿತ್ತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಈಗ ಕಾಂಗ್ರೆಸ್ ಪಕ್ಷಕ್ಕೆ ಹೊಸ ನೋಟೀಸ್ ನೀಡಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಯಾಗಿದೆ.

ಉಚ್ಚ ನ್ಯಾಯಾಲಯದ ಅಭಿಪ್ರಾಯಕ್ಕೆ ಎದುರಾಗಿ ಸುಪ್ರೀಂಕೋರ್ಟ್​ನ ಮೊರೆ ಬೀಳುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆ ಆರಂಭಕ್ಕೆ ದಿನಗಣನೆ ನಡೆದಿರುವಂತೆಯೇ ಕಾಂಗ್ರೆಸ್​ಗೆ ಫಂಡಿಂಗ್ ಸಮಸ್ಯೆ ಎದುರಾಗಿದೆ. 200 ಕೋಟಿ ರೂ ಪೆನಾಲ್ಟಿ ಹಾಕಿರುವ ಐಟಿ ಇಲಾಖೆ ಕಾಂಗ್ರೆಸ್​ನ ಕೆಲ ಬ್ಯಾಂಕ್ ಖಾತೆಗಳನ್ನು ಅಟ್ಯಾಚ್ ಮಾಡಿದೆ.

ದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕೆಲ ಬ್ಯಾಂಕ್ ಖಾತೆಗಳಿಂದ ಐಟಿ ಇಲಾಖೆ 135 ಕೋಟಿ ರೂ ಹಣವನ್ನು ವಿತ್​ಡ್ರಾ ಮಾಡಿತ್ತು. 2018-19ರ ಅಸೆಸ್ಮೆಂಟ್ ವರ್ಷದ ತೆರಿಗೆ ಬಾಕಿ ಮತ್ತು ಬಡ್ಡಿ ಹಣ ಅದಾಗಿತ್ತು. ಈ ಬೆಳವಣಿಗೆಯು ಕಾಂಗ್ರೆಸ್ ಪಕ್ಷದ ನಾಯಕರನ್ನು ಆಕ್ರೋಶಕ್ಕೆ ಕಾರಣವಾಯಿತ್ತು.

ತನ್ನ ಬ್ಯಾಂಕ್ ಖಾತೆಗಳನ್ನು ಐಟಿ ಇಲಾಖೆ ಮುಟ್ಟುಗೋಲು ಹಾಕಿದೆ. ಹಣ ತೆಗೆಯಲು ಅಗುತ್ತಿಲ್ಲ ಎಂದು ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಆರೋಪ ಮಾಡಿ ಕೇಂದ್ರ ಬಿಜೆಪಿ ವಿರುದ್ದ ದೂಷಿಸಿತ್ತು. ಅಕೌಂಟ್ ಮುಟ್ಟುಗೋಲು ಹಾಕಿಕೊಂಡಿರುವ ಕ್ರಮವು ಪ್ರಜಾತಂತ್ರ ವ್ಯವಸ್ಥೆ ಮೆಲೆ ನಡೆದ ಆಕ್ರಮಣ ಎಂದು ಕಾಂಗ್ರೆಸ್ ಆರೋಪ ಮಾಡಿದೆ.