Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕ್ರೈಸ್ತರಿಗೆ ಶುಭ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ- ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ‌..!

ರಾಜ್ಯದ ಕ್ರೈಸ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಸುದ್ದಿ ನೀಡಿದ್ದು ಶೀಘ್ರದಲ್ಲೇ ಕ್ರೈಸ್ತರ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬೆಂಗಳೂರು :ರಾಜ್ಯದ ಕ್ರೈಸ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಸುದ್ದಿ ನೀಡಿದ್ದು ಶೀಘ್ರದಲ್ಲೇ ಕ್ರೈಸ್ತರ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಗರದ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಈ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರವಾಗಿದ್ದು ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ.

ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತೀ ವರ್ಷ ತಪ್ಪದೆ ಹಾಜರಾಗುತ್ತೇನೆ.

ಕ್ರೈಸ್ತ ಸಮುದಾಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಪ್ರಗತಿ ಸಾಧಿಸಿ ನಾಡಿಗೆ ಸೇವೆ ಸಲ್ಲಿಸಿರುವುದಕ್ಕೆ ಮೆಚ್ಚುಗೆ ಸೂಚಿಸಿದರು.

ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್ ನಲ್ಲೇ ಘೋಷಿಸಿದ್ದೇವೆ .

ಇದಕ್ಕಾಗಿ ನೂರು ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಭರವಸೆ ನೀಡಿದರು.

ಅನೈತಿಕ ಪೋಲಿಸ್ ಗಿರಿ ಸಹಿಸಲ್ಲ :

ರಾಜ್ಯದಲ್ಲಿ ಅನೈತಿಕ ಪೊಲೀಸ್ ಗಿರಿಗೆ ಅಸ್ಪದವಿಲ್ಲ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

ಭಾರತವೇ ಒಂದು ಭಾವೈಕ್ಯತಾ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ.

ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ.

ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ ಎಂದರು.

ಅನೈತಿಕ ಪೊಲೀಸ್ ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.