Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗನ್‌ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ವ್ಯಕ್ತಿ!

ಬೆಂಗಳೂರು: ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ವ್ಯಕ್ತಿಯೊಬ್ಬ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಚಾರದ ವೇಳೆ ಗನ್ ಇಟ್ಟುಕೊಂಡು ವಾಹನ ಏರಿ ಸಿಎಂಗೆ ವ್ಯಕ್ತಿಯೊಬ್ಬ ಹಾರ ಹಾಕಿದ್ದಾನೆ.

ಗನ್ ಇಟ್ಟುಕೊಂಡು ಸಿಎಂಗೆ ಹಾರ ಹಾಕಿದ ವ್ಯಕ್ತಿಯನ್ನು ರಿಯಾಜ್ ಎಂದು ಗುರುತಿಸಲಾಗಿದೆ. ಆತ ಸಿದ್ದಾಪುರದ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, 5 ವರ್ಷಗಳ ಹಿಂದೆ ರಿಯಾಜ್ ಮೇಲೆ ಕೊಲೆ ಯತ್ನ ನಡೆದಿತ್ತು. ಬಳಿಕ ಗನ್ ಪರವಾನಿಗೆ ಪಡೆದುಕೊಂಡಿದ್ದ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಆರ್.ವಿ ದೇವರಾಜ್, ರಿಯಾಜ್ ಕಾಂಗ್ರೆಸ್‍ನ ಕಾರ್ಯಕರ್ತ, ನಾಲ್ಕೈದು ವರ್ಷಗಳ ಹಿಂದೆ ಅವನ ಮೇಲೆ ಅಟ್ಯಾಕ್ ಆಗಿತ್ತು. ಇದರಿಂದ ಗನ್ ಲೈಸೆನ್ಸ್ ಪಡೆದುಕೊಂಡು, ಇಟ್ಟುಕೊಂಡಿದ್ದಾನೆ ಅನ್ಸುತ್ತೆ. ಅವನೇನು ರೌಡಿ ಅಲ್ಲ ಎಂದಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಗನ್ ಇಟ್ಟುಕೊಳ್ಳಲು ಅವಕಾಶ ಇಲ್ಲ. ತೀರಾ ಅವಶ್ಯಕತೆ ಇದ್ದರೆ ಮಾತ್ರ ಈ ಸಂದರ್ಭದಲ್ಲಿ ಗನ್ ಇಟ್ಟುಕೊಳ್ಳಲು ಅವಕಾಶವಿದೆ. ಕಮಿಷನರ್ ಅವರಿಂದ ಅನುಮತಿ ಸಿಕ್ಕರೆ ಮಾತ್ರ ಗನ್ ಇಟ್ಟುಕೊಳ್ಳಬಹುದು. ತೀರಾ ಅವಶ್ಯಕತೆ ಇದ್ದವರಿಗೆ ಮಾತ್ರ ಗನ್ ಇಟ್ಟುಕೊಳ್ಳಲು ಅವಕಾಶವಿದೆ.ಇದು ಪೊಲೀಸ್ ಭದ್ರತಾ ವೈಫಲ್ಯನಾದಿಂದ ಹೀಗಾಯಿತಾ? ಲೈಸೆನ್ಸ್ ಹೊಂದಿದ ವ್ಯಕ್ತಿ ಆದರೂ  ಸಿಎಂ ಬಳಿ ಗನ್ ಇಟ್ಟುಕೊಂಡು ಹೋಗಬಹುದಾ ಎಂಬುವುದು ಚರ್ಚೆಯಾಗುತ್ತಿದೆ.