Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚೀನಾದಲ್ಲಿ ‘ನ್ಯುಮೋನಿಯಾ H9n’ ಎಂಬ ಹೊಸ ವೈರಸ್ ಪತ್ತೆ

ಚೀನಾ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೋವಿಡ್ ಅದೆಷ್ಟೋ ಜೀವಗಳನ್ನು ಬಲಿತೆಗೆದುಕೊಂಡಿದ್ದು ಇನ್ನೂ ವರ್ಷಗಳು ಕಳೆಯುವ ಮುನ್ನವೇ ಚೀನಾದಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ಸೊಂಕು ಜನರನ್ನು ಭಯಭೀತ ಗೊಳ್ಳುವಂತೆ ಮಾಡಿದೆ.

ಈ ಸೋಂಕಿನ ಹೆಸರು ನ್ಯುಮೋನಿಯಾ H9n2 ಆಗಿದ್ದು ಇದು ಈಗ ಈ ಸೋಂಕು ಚೀನಾದ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಈ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆ ತುರ್ತು ಸಭೆಯನ್ನು ನಡೆಸಿದ ಆರೋಗ್ಯ ಇಲಾಖೆ ಈ ಪ್ರಕರಣದ ಕುರಿತು ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.

ಚೀನಾದಲ್ಲಿ ಕಾಣಿಸಿಕೊಂಡಿರುವ ನ್ಯುಮೋನಿಯಾ H9n2 ಸೋಂಕು ವಿವಿಧ ದೇಶಗಳ ಆತಂಕ ಹೆಚ್ಚಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಈ ಪ್ರಕರಣದ ಕುರಿತು ತೀವ್ರ ನಿಘಾವಹಿಸಲು ಸೂಚನೆ ನೀಡಿದೆ. ಇದೇ ವೇಳೆ ಈ ಸೋಂಕಿನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

ಸೋಂಕಿನಿಂದ ಆಸ್ಪತ್ರೆ ದಾಖಲಾಗುವ ಮಕ್ಕಳ ದಿಡೀರ್ ಏರಿಕೆಯಾಗಿದ್ದು ಶಾಲೆಗಳ ಮಕ್ಕಳು ಹೆಚ್ಚಾಗಿ ಆಸ್ಪತ್ರೆ ದಾಖಲಾಗಿದ್ದಾರೆ. ಆಸ್ಪತ್ರೆಗಳು ಬಹುತೇಕ ಭರ್ತಿಯಾಗಿದೆ. ಇದು ಚೀನಾದಲ್ಲಿ ಆತಂಕ ಹೆಚ್ಚಿಸಿದೆ. ಸೋಂಕು ತಗುಲಿದ ಮಕ್ಕಳು ಶ್ವಾಸಕೋಶದ ಉರಿ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಕೋವಿಡ್‌ನಂಥ ಇತರೆ ಶ್ವಾಸಕೋಶ ಸಂಬಂಧಿ ಸಮಸ್ಯೆ ವೇಳೆ ಕಾಣಿಸಿಕೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿಲ್ಲ. ದೇಶದಲ್ಲಿ ಚಳಿಗಾಲ ವ್ಯಾಪಕವಾಗುತ್ತಿರುವ ಹೊತ್ತಿನಲ್ಲೇ ಕಾಣಿಸಿಕೊಂಡ ಈ ಸೋಂಕು ಪ್ರಸಕ್ತ ವಾತಾವರಣದಲ್ಲಿ ಇನ್ನಷ್ಟು ವ್ಯಾಪಕವಾಗುವ ಆತಂಕವೂ ಇದೆ. ಕೋವಿಡ್ ರೀತಿ ಜಗತ್ತಿಗೆ ಈ ಸೋಂಕು ಹರಡುವ ಸಾಧ್ಯತೆ ಕುರಿತು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೀತಿಯಲ್ಲೇ ಚೀನಾ ದೇಶವು ಇದೀಗ ಈ ಸೋಂಕು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿದೆ. ಚೀನಾದ ಒಂದು ಪ್ರಾಂತ್ಯದಲ್ಲಿ ಕಾಣಿಸಿಕೊಂಡ ಸಹಜ ಅನಾರೋಗ್ಯ ಎನ್ನುವ ರೀತಿಯಲ್ಲಿ ಜಗತ್ತಿಗೆ ತೋರಿಸುವ ಪ್ರಯತ್ನ ಮಾಡುತ್ತಿದೆ ಎನ್ನುವ ಮಾತುಗಳು ಇದೀಗ ಕೇಳಿಬರುತ್ತಿದೆ.