Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಲಮಂಡಳಿಯ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಖಾಲಿ ಇರುವ ಸುಮಾರು 64 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಮಾರ್ಚ್‌ 10 ಕಡೆಯ ದಿನ ಎಂದು ಹೇಳಲಾಗಿತ್ತು. ಇದೀಗ ಅವಧಿಯನ್ನು ಮಾರ್ಚ್‌ 21ರ ತನಕ ವಿಸ್ತರಿಸಲಾಗಿದೆ. ಸಹಾಯಕ ಎಂಜಿನಿಯರ್‌ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು
ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಫ್‌ಲೈನ್‌ ಮೂಲಕ ಒಎಂಆರ್‌ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುವುದು. ತಲಾ ನೂರು ಅಂಕಗಳ ಎರಡು ಪ್ರಶ್ನೆ ಪತ್ರಿಕೆ ಇರಲಿದೆ.