Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜೀತ ಪದ್ದತಿಯನ್ನು ಬುಡ ಸಮೇತ ಕಿತ್ತೊಗೆಯಬೇಕು; ರಾಜೇಶ್ವರಿ ಎನ್.ಹೆಗಡೆ

 

ದಾವಣಗೆರೆ; ಜೀತ ಪದ್ದತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಲಾಗಿದ್ದರೂ ಅಲ್ಲಲ್ಲಿ ವರದಿಯಾಗುತ್ತಿದ್ದು ಇದನ್ನು ಬುಡ ಸಮೇತ ಕಿತ್ತುಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದರು.

ಜಿಲ್ಲಾಡಳಿತ, ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಜೀತಪದ್ದತಿ ನಿರ್ಮೂಲನಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಈ ಹಿಂದಿನ ಕಾಲದಿಂದಲೂ ಜೀತ ಪದ್ದತಿ ರೂಡಿಯಲ್ಲಿದೆ, ಮನೆಯಲ್ಲಿ ಹಣಕಾಸಿನ ತೊಂದರೆಯಾದರೆ ಶ್ರೀಮಂತರ ಬಳಿ ಹಣವನ್ನು ಪಡೆಯುತ್ತಿದ್ದರು. ಪಡೆದ ಹಣಕ್ಕೆ ಬಡ್ಡಿಯ ರೂಪದಲ್ಲಿ ಎಲ್ಲರೂ ಸಹ ಅವರ ಮನೆಯಲ್ಲಿ ಜೀತವನ್ನು ಮಾಡಬೇಕಿತ್ತು. ಜೀತ ಪದ್ದತಿ ರದ್ದತಿ ಕಾಯ್ದೆಯನ್ನು 1976 ರಲ್ಲಿ ದೇಶದಾದ್ಯಂತ ಜಾರಿ ಮಾಡಲಾಯಿತು. ಜೀತ ಪದ್ದತಿ ಎಲ್ಲಿ ಇದೆ, ಅದನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅದನ್ನು ನಿರ್ಮೂಲನೆ ಮಾಡಬೇಕು. ಇಂತಹ ಪ್ರಕರಣಗಳು ಕಂಡುಬಂದರೆ ಅಂಥವರಿಗೆ ಪುನರ್ವಸತಿ ಕಲ್ಪಿಸಬೇಕು ಎಂದ ಅವರು ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು.