Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಡೀಪ್‌ಫೇಕ್ ಬಗ್ಗೆ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದೇನು.?

 

ದೆಹಲಿ: ಡೀಪ್‌ಫೇಕ್‌ ವಿಡಿಯೋ ಪ್ರಕರಣಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಅನೇಕ ಸಾಮಾಜಿಕ ಮಾಧ್ಯಮ ಕಂಪನಿಗಳೊಂದಿಗೆ ಚರ್ಚಿಸಲಾಗುತ್ತಿದ್ದು, ನ.24ರವರೆಗೆ ಕಾಯಿರಿ ಎಂದಿದ್ದಾರೆ. ಈ ಮೂಲಕ ಡೀಪ್‌ಫೇಕ್ ವಿಡಿಯೋ ಮಾಡುವವರ ವಿರುದ್ಧ ಕೇಂದ್ರ ಕಠಿಣ ಕ್ರಮಕೈಗೊಳ್ಳುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ, ಪ್ರಧಾನಿ ಮೋದಿ ಸೇರಿದಂತೆ ಅನೇಕರ ಡೀಪ್‌ಫೇಕ್ ವಿಡಿಯೋ ಹರಿಬಿಡಲಾಗಿತ್ತು.