Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಡ್ರ್ಯಾಗನ್ ನಾಡಿನಲ್ಲಿ ನ್ಯುಮೋನಿಯಾ ವೈರಸ್ ತಾಂಡವ – ಕೊವಿಡ್ ಮಾದರಿಯ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಚೀನಾದಲ್ಲಿ ನಿಗೂಢ ನ್ಯುಮೋನಿಯಾ ವೈರಸ್​ ಆತಂಕದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಲರ್ಟ್​​ ಆಗಿದೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುತ್ತೋಲೆ ಹೊರಡಿಸಿದೆ. ನ್ಯುಮೋನಿಯಾ ವೈರಸ್​ ಎದುರಿಸಲು ಸಿದ್ದತೆ ಕೈಗೊಳ್ಳುವಂತೆ ಸೂಚಿಸಿದೆ. ಈ ಬೆನ್ನಲ್ಲೆ, ಕೊರೊನಾ ಹೋಲಿಕೆಯ ಮಾರ್ಗಸೂಚಿಗಳನ್ನೇ ರಾಜ್ಯ ಸರ್ಕಾರ ಪ್ರಕಟಿಸಿದೆ. ನ್ಯುಮೋನಿಯಾ ಮತ್ತು ಇತರ ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಹಲವು ಸೂಚನೆ ನೀಡಿದೆ. ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ವರದಿ ಮಾಡುವಂತೆ ಸಲಹೆ ನೀಡಿದೆ. ವೈದ್ಯರನ್ನು ಸಂಪರ್ಕಿಸದೆ ಸ್ವಯಂ ಔಷಧಿಗಳನ್ನ ತೆಗದುಕೊಳ್ಳಬೇಡಿ ಎಂದು ಹೇಳಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ ತೊಳೆದುಕೊಳ್ಳುವುದು ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವ ಇರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ವೈದ್ಯರನ್ನು ಸಂಪರ್ಕಿಸದೇ ಸ್ವಯಂ-ಔಷಧಿಗಳನ್ನು ತೆಗೆದುಕೊಳ್ಳಬೇಡಿ