Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದಾಲ್ ಸರೋವರದಲ್ಲಿ ಭಾರಿ ಅಗ್ನಿ ಅವಘಡ -ಕೋಟ್ಯಂತರ ಮೌಲ್ಯದ ಆಸ್ತಿ ನಷ್ಟ

ಶ್ರೀನಗರ: ಪ್ರಸಿದ್ಧ ಪ್ರವಾಸಿ ತಾಣವಾದ ದಾಲ್ ಸರೋವರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಾಲ್ ಸರೋವರದ ಹತ್ತಿರವಿದ್ದ ಸುಮಾರು 5 ಹೌಸ್‌ ಬೋಟ್‌ಗಳ ಜೊತೆಗೆ 3 ಗುಡಿಸಲುಗಳು ಸುಟ್ಟು ಬೆಂಕಿಗೆ ಆಹುತಿಯಾಗಿದೆ. ಇನ್ನು ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಲ್ ಸರೋವರವು ಶ್ರೀನಗರದ ಪ್ರವಾಸಿ ತಾಣದಲ್ಲೇ ಅತೀ ಹೆಚ್ಚು ಪ್ರಸಿದ್ಧಿಯನ್ನು ಪಡೆದಿರುವ ಪ್ರವಾಸಿತಾಣವಾಗಿದೆ. ಸರೋವರಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಲ್ಲದೆ ಇಲ್ಲಿನ ಹೌಸ್ ಬೋಟ್ ಗಳು ಜನಪ್ರಿಯವಾಗಿದ್ದು, ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತದೆ. ಇನ್ನು ಈ ಅಗ್ನಿ ಅವಘಡವು ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.