Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ದಾವಣಗೆರೆ:  2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.  ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ಹದಡಿ ರಸ್ತೆಯಲ್ಲಿನ ಸರ್‍ಎಂವಿ ಪದವಿ ಪೂರ್ವ ಕಾಲೇಜಿನ ಮಮತ 588 ಅಂಕ ಪಡೆದು ಶೇ 98 ರಷ್ಟು ಅಂಕ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.