Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ನಮ್ಮ ಶಾಸಕರಿಗೆ ಆಸೆ-ಆಮೀಷ ತೋರಿಸಿ ಕುಪೇಂದ್ರ ರೆಡ್ಡಿ ಬೆದರಿಸಿದ್ದಾರೆ’- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕುಪೇಂದ್ರ ರೆಡ್ಡಿ ಅವರು, ನಮ್ಮ ಶಾಸಕರಿಗೆ ಆಸೆ-ಆಮೀಷ ತೋರಿಸಿ ಬೆದರಿಸಿದ್ದಾರೆ. ಈ ಹಿನ್ನೆಲೆ ಅವರ ಮೇಲೆ ಎಫ್​ಐಆರ್ ದಾಖಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ನನಗಿದೆ. ಆತ್ಮಸಾಕ್ಷಿ ಮತ ಅಂದ್ರೆ ಏನು? ಆತ್ಮಸಾಕ್ಷಿ ಎಂದು ಮತಗಳು ಇರುತ್ತವಾ? ಅವರ ಮತಗಳೆಲ್ಲಾ ಕಾಂಗ್ರೆಸ್ ನ ಅಭ್ಯರ್ಥಿಗಳಿಗೆ ಸಿಗುತ್ತವೆ. ನಮ್ಮ ಪಕ್ಷದ ಶಾಸಕರಿಗೆ ಬೆದರಿಕೆ ಹಾಕಿರುವುದರಿಂದ ಕುಪೇಂದ್ರ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲಾಗಿದೆ ಎಂದು ತಿಳಿಸಿದರು.

ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಇಂದು ಬೆಳಗ್ಗೆ 10 ಗಂಟೆಯಿಂದಲೇ ಮತದಾನ ಆರಂಭಗೊಂಡಿದೆ. 4 ಸ್ಥಾನಗಳಿಗೆ ನಡೆಯುತ್ತಿರುವ ಈ ಚುನಾವಣೆಗೆ 5 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿರುವ ಈ ಐವರ ಪೈಕಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾದ ಕುಪೇಂದ್ರ ರೆಡ್ಡಿ ಶಾಸಕರ ಬಳಿ ಮತಯಾಚಿಸಿದ ಆರೋಪದಡಿ ದೂರು ದಾಖಲಾಗಿದೆ.