Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪಕ್ಷದ ಶಿಸ್ತು ಉಲ್ಲಂಘನೆ ಆರೋಪ; ಆಂಧ್ರಪ್ರದೇಶದ 8 ಶಾಸಕರು ಅನರ್ಹ

ಅಮರಾವತಿ: ಆಂಧ್ರಪ್ರದೇಶದ ವಿಧಾನಸಭೆಯ ಸ್ಪೀಕರ್ ತಮ್ಮನೇನಿ ಸೀತಾರಾಮ್ ಅವರು 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ಅನರ್ಹಗೊಂಡ 8 ಶಾಸಕರು ತಮ್ಮ ಮೂಲ ಪಕ್ಷದಿಂದ ಬೇರೆ ಪಕ್ಷಕ್ಕೆ ಅವರ ನಿಷ್ಠೆಯನ್ನು ಬದಲಾಯಿಸಿದ್ದಾರೆ. ಇದರಿಂದ ಪ್ರಜಾಪ್ರಭುತ್ವ ರಚನೆ ಹಾಗೂ ಮತದಾರರ ಆದೇಶವನ್ನು ದುರ್ಬಲಗೊಳಿಸುತ್ತದೆ ಎಂದು ಸ್ಪೀಕರ್ ತಮ್ಮನೇನಿ ಸೀತಾರಾಮ್ ತಿಳಿಸಿದ್ದಾರೆ.

ವೈಎಸ್ಆರ್ ಸಿಪಿ ಸಲ್ಲಿಸಿದ ಅರ್ಜಿಯ ಮೇರೆಗೆ ಆ ಪಕ್ಷದ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ, ಶ್ರೀಧರ್ ರೆಡ್ಡಿ ಹಾಗೂ ಉಂಡವಳ್ಳಿ ಶ್ರೀದೇವಿಯನ್ನು ಅನರ್ಹಗೊಳಿಸಲಾಗಿದೆ. ಜೊತೆಗೆ ತೆಲುಗು ದೇಶಂ ಪಕ್ಷ(ಟಿಡಿಪಿ) ಸಲ್ಲಿಸಿದ ಅರ್ಜಿಯ ಮೇರೆಗೆ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಹಾಗೂ ವಾಸುಪಲ್ಲಿ ಗಣೇಶ್ ಅವರನ್ನು ಅನರ್ಹಗೊಂಡಿದ್ದಾರೆ.

ಅನರ್ಹಗೊಂಡ ಶಾಸಕರ ವಿರುದ್ಧ ವೈಎಸ್ಆರ್ ಸಿಪಿ ಮಾಡಿದ ಆರೋಪಗಳು ಮತ್ತು ಸಾಕ್ಷ್ಯಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಈ ನಿರ್ಧಾರಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ(ಸಿಎಂಒ) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ವೈಎಸ್ಆರ್ ಸಿಪಿ ಸಲ್ಲಿಸಿದ ಅರ್ಜಿಯಲ್ಲಿ ಅನರ್ಹಗೊಂಡ ಸದಸ್ಯರು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದಾರೆ. ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪ ಮಾಡಲಾಗಿದೆ.