Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ದಿನೇಶ್ ಗುಂಡೂರಾವ್ ಚಾಲನೆ

ಧಾರವಾಡ:ಹಠಾತ್ ಹೃದಯಾಘಾತವಾದಾಗ ತುರ್ತಾಗಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಸತ್ತೂರಿನ ಡಾ.ಡಿ.ವೀ ರೇಂ ದ್ರ ಹಗ್ಗಡೆ ಕಲಾ ಕ್ಷೇ ತ್ರ ಭವನದಲ್ಲಿ ಶುಕ್ರವಾರ ಆಯೋ ಜಿಸಿದ್ದ ಕರ್ನಾ ಟಕ ರತ್ನ ಡಾ.ಪುನೀ ತ್ ರಾಜಕುಮಾರ್ ಹೃದಯಜ್ಯೋತಿ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಹೃದಯಾಘಾತ ಸಂಭವಿಸಿದಾಗ ಸಮುದಾಯ, ತಾಲ್ಲೂಕು ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿ ತಕ್ಷಣವೇ ಕೃತಕ ಬುದ್ಧಿಮತೆ (ಎಐ)ಮೂಲಕ ಆಘಾತದ ತೀವ್ರತೆ ಪತ್ತೆಯನ್ನು ಹಚ್ಚುವ ನಿಟ್ಟಿನಲ್ಲಿ ಕಿಟ್‌ಗಳನ್ನು ಒದಗಿಸಲಾಗಿದೆ. ಆಸ್ಪತ್ರೆಯ ವೈದ್ಯರು ತಜ್ಞರನ್ನು ಫೋನ್‌ನಲ್ಲಿ ಸಂಪರ್ಕಿಸಿ ತಂತ್ರಾಂಶ ಮೂಲಕ ಆಘಾತ ಪ್ರಮಾಣ ಪತ್ತೆ ಹಚ್ಚುತ್ತಾರೆ. ಆರು ನಿಮಿಷದಲ್ಲಿ ಈ ಪ್ರಕ್ರಿಯೆ ನಡೆಸುತ್ತಾರೆ ಎಂದರು.

ಆಘಾತ ತೀವ್ರ ಪ್ರಮಾಣದಲ್ಲಿ ಆಗಿದ್ದರೆ ತಜ್ಞರ ಸಲಹೆ ಪಡೆದು ವೈದ್ಯರು ತಕ್ಷಣವೇ ‘ಟೆನೆಕ್ಟ್ಪಾಲ್ಸ್’ ಚುಚ್ಚುಮದ್ದು ನೀಡುತ್ತಾರೆ. ಹೃದಯದಲ್ಲಿ ಬ್ಲಾಕ್’ ಆಗುವುದನ್ನು ಚುಚ್ಚುಮದ್ದು ತಡೆಯುತ್ತದೆ. ಹೃದಯಾಘಾತವಾದಾಗ ಸುವರ್ಣ ಅವಧಿಯಲ್ಲಿ (ಗೋಲ್ಡನ್ ಹವರ್) ಚಿಕಿತ್ಸೆ ನೀಡಿ ಜೀವ ಉಳಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

15 ಜಿಲ್ಲೆಗಳ 71 ತಾಲ್ಲೂಕು ಆಸ್ಪತ್ರೆಗಳಿಗೆ ಈ ಯೋಜನೆ ಲಿಂಕ್‌ ಇಡಲಾಗಿದೆ. 71 ಆಸ್ಪತ್ರೆಗಳಿಗೆ ಚುಚ್ಚು ಮದ್ದುಗಳನ್ನು ಆಸ್ಪತ್ರೆಗೆ ಪೂರೈಸಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಿಗೂ ಈ ಯೋಜನೆ ವಿಸ್ತರಿಸಲಾಗುವುದು ಎಂದು ಹೇಳಿದರು.

ಪುನೀತ್ ರಾಜಕುಮಾರ್ ಅವರು ನಟ ಮಾತ್ರವಲ್ಲ ಮನುಷ್ಯತ್ವಕ್ಕೆ ಹೆಸರಾದವರು. ಹೀಗಾಗಿ ಯೋಜನೆಯನ್ನು ಅರ್ಥ ಪೂರ್ಣ ವಾಗಿಸಲು ಇದಕ್ಕೆ ಅವರ
ಹೆಸರು ನಾಮಕರಣ ಮಾಡಲಾಗಿದೆ ಎಂದರು.ಜನದಟ್ಟಣೆಯ ಸಾರ್ವಜನಿಕ ಸ್ಥಳಗಳಲ್ಲಿ (ಬಸ್, ರೈಲು, ವಿಮಾನ ನಿಲ್ದಾಣ, ಕೋ ರ್ಟ್‌ )ಸ್ವಯಂ ಚಾಲಿತ ಡಿಫಿಬ್ರಿಲೇಟರ್ (ಎಇಡಿ)ಸಾಧನಗಳನ್ನು ಅಳವಡಿಸಲು ಸಿದ್ಧತೆ ನಡೆದಿದೆ. ಹೃದಯ ಸ್ತಂಭನ ಆದಾಗ ಶಾಖ ನೀ ಡಿ ಹೃದಯ ಮತ್ತೆ ಕೆಲಸ ನಿರ್ವಹಿಸುವಂತೆ ಮಾಡಲು ಬಳಸುವ ಸಾಧನ ಇದು ಎಂದರು.