Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿವೇತನ ಶುಲ್ಕ ಅವಧಿ ವಿಸ್ತರಣೆ

 

     ದಾವಣಗೆರೆ; ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜ.15 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ಕೆ.ಹೆಚ್. ತಿಳಿಸಿದ್ದಾರೆ.