Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ – 30ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿ

ಬೆಂಗಳೂರು:‌ ನಾಯಂಡಹಳ್ಳಿ ಸಮೀಪದ ಗಂಗೊಂಡನಹಳ್ಳಿ ಬಳಿ ಪ್ಲಾಸ್ಟಿಕ್ ಗೋದಾಮು ಶೆಡ್​​ನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿ ಆಗಿರುವ ಘಟನೆ ತಡರಾತ್ರಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇನ್ನು ರಿಜ್ವಾನ್ ಎಂಬುವವರಿಗೆ ಸೇರಿದ ಪಾರ್ಕಿಂಗ್ ಜಾಗ ಇದಾಗಿದ್ದು, ಬಾಡಿಗೆಗೆ ಪಡೆದು ಪಾರ್ಕಿಂಗ್ ನಡೆಸುತ್ತಿದ್ದರು. ಪ್ರತಿ ದಿನ ವಾಹನಕ್ಕೆ 30 ರೂಪಾಯಿ ಚಾರ್ಜ್ ಮಾಡುತ್ತಿದ್ದರು. ಪಾರ್ಕಿಂಗ್ ಸ್ಥಳದ ಪಕ್ಕದಲ್ಲೇ ಪ್ಲಾಸ್ಟಿಕ್ ಗೋಡೌನ್ ಕೂಡ ಇತ್ತು ಎನ್ನಲಾಗಿದೆ.