Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಡತನ ರೇಖೆಯಿಂದ 24.8 ಕೋಟಿ ಜನ ಹೊರಕ್ಕೆ- NITI ವರದಿ

ನವದೆಹಲಿ: ದೇಶದಲ್ಲಿ ಕಳೆದ ಒಂಬತ್ತು ವರ್ಷಗಳ ಆಡಳಿತಾವಧಿಯಲ್ಲಿ ಒಟ್ಟು 24.82 ಕೋಟಿ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು NITI ಆಯೋಗ ವರದಿ ಮಾಡಿದೆ. ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಬಡತನದಲ್ಲಿ ಗರಿಷ್ಠ ಇಳಿಕೆ ಕಂಡುಬಂದಿದೆ. 2013-14 ರಲ್ಲಿ ದೇಶದಲ್ಲಿ ಬಹುಆಯಾಮದ ಬಡತನವು ಶೇಕಡಾ 29.17 ರಷ್ಟಿತ್ತು. ಇದು 2022-23 ರಲ್ಲಿ ಶೇಕಡಾ 11.28 ಕ್ಕೆ ಇಳಿದಿದೆ ಎಂದು ವರದಿ ಹೇಳಿದೆ.

ಈ ವರದಿಯನ್ನು 2 ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಸಂಬಂಧಿಸಿದ ಸೂಚಕಗಳ ಮೂಲಕ ರಾಷ್ಟ್ರೀಯ ಬಹು ಆಯಾಮವನ್ನು ಮಾಡಲಾಗಿದೆ. ಇವುಗಳಲ್ಲಿ ಪೌಷ್ಠಿಕಾಂಶ, ಮಕ್ಕಳ ಮತ್ತು ಹದಿಹರೆಯದವರ ಮರಣ, ತಾಯಿಯ ಆರೋಗ್ಯ, ಶಾಲಾ ಶಿಕ್ಷಣದ ವರ್ಷಗಳು, ಶಾಲಾ ಹಾಜರಾತಿ, ಅಡುಗೆ ಇಂಧನ, ನೈರ್ಮಲ್ಯ, ಕುಡಿಯುವ ನೀರು, ವಿದ್ಯುತ್, ವಸತಿ, ಆಸ್ತಿಗಳು ಮತ್ತು ಬ್ಯಾಂಕ್ ಖಾತೆಗಳು ಸೇರಿವೆ ಎಂದು NITI ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ನಾವು ಅಂತರ್ಗತ ಬೆಳವಣಿಗೆಯನ್ನು ಹೆಚ್ಚಿಸುವ ಕಡೆಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮ ಆರ್ಥಿಕತೆಗೆ ಪರಿವರ್ತಕ ಬದಲಾವಣೆಗಳ ಮೇಲೆ ಕೇಂದ್ರೀಕರಿಸುತ್ತದೆ. ಇನ್ನು ಮುಂದೆಯು ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತು ಪ್ರತಿಯೊಬ್ಬ ಭಾರತೀಯನ ಸಮೃದ್ಧ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.