Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ – 34 ಮಂದಿ ಮೃತ್ಯು, ಅನೇಕರಿಗೆ ಗಾಯ

ಪಾಕಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟ ಸಂಭವಿಸಿ 34 ಜನರು ಮೃತಪಟ್ಟು 100 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಪ್ರವಾದಿ ಮುಹಮ್ಮದ್ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು ಜನರು ಸೇರುತ್ತಿದ್ದ ಬಲೂಚಿಸ್ತಾನ್ ಮಸ್ತುಂಗ್ ಜಿಲ್ಲೆಯ ಮಸೀದಿಯ ಬಳಿ ಭಾರೀ ಸ್ಫೋಟ ಸಂಭವಿಸಿದೆ.

ಇನ್ನು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸ್ಫೋಟದ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ ಎನ್ನಲಾಗಿದೆ.