Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಿಜೆಪಿ ದೇಶದಲ್ಲೇ ಅತ್ಯಂತ ಶ್ರೀಮಂತ ಪಕ್ಷ: 8,829.16 ಕೋಟಿ ರೂ. ಆಸ್ತಿ, ಕಾಂಗ್ರೆಸ್ ಬಳಿ 6,046 ಕೋಟಿ ರೂ. ಆಸ್ತಿ

ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಆಸ್ತಿ ವಿವರವನ್ನು ಪ್ರಕಟಿಸಿವೆ. ದೇಶದ ಎಂಟು ರಾಷ್ಟ್ರೀಯ ಪಕ್ಷಗಳು 2021-22ರಲ್ಲಿ ಒಟ್ಟು 8,829.16 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿವೆ. ಈ ಪೈಕಿ ಆಡಳಿತರೂಢ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, 6,046 ಕೋಟಿ ರೂಪಾಯಿ ಆಸ್ತಿ ಘೋಷಿಸಿಕೊಂಡಿದೆ.

2020-21ರಲ್ಲಿ ಈ ಎಂಟು ರಾಷ್ಟ್ರೀಯ ಪಕ್ಷಗಳ ಒಟ್ಟು ಆಸ್ತಿ 7,297.62 ಕೋಟಿ ರೂ.ಗಳಷ್ಟಿತ್ತು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿ ಮಾಡಿದೆ. ಎಂಟು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಎನ್ಸಿಪಿ, ಬಿಎಸ್ಪಿ, ಸಿಪಿಐ, ಸಿಪಿಐ(ಎಂ), ಎಐಟಿಸಿ ಮತ್ತು ಎನ್ಪಿಇಪಿ ಘೋಷಿಸಿದ 2020-21 ಮತ್ತು 2021-22ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಎಡಿಆರ್ ವಿಶ್ಲೇಷಿಸಿದೆ. ಎಡಿಆರ್ ಪ್ರಕಾರ, 2020-21ರ ಆರ್ಥಿಕ ವರ್ಷದಲ್ಲಿ, ಬಿಜೆಪಿಯು 4,990 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿತ್ತು. 2021-22 ರಲ್ಲಿ ಕೇಸರಿ ಪಕ್ಷದ ಆಸ್ತಿ 6,046.81 ಕೋಟಿಗೆ ಅಂದರೆ ಶೇ. 21.17 ರಷ್ಟು ಹೆಚ್ಚಾಗಿದೆ.

2020-21ರಲ್ಲಿ ಕಾಂಗ್ರೆಸ್ ಘೋಷಿತ ಆಸ್ತಿ 691.11 ಕೋಟಿ ರೂ.ಗಳಷ್ಟಿತ್ತು. ಇದು 2021-22ರಲ್ಲಿ ಶೇ.16.58 ರಷ್ಟು ಏರಿಕೆಯಾಗಿ 805.68 ಕೋಟಿ ರೂ.ಗೆ ತಲುಪಿದೆ. ಬಿಎಸ್ಪಿ ತನ್ನ ವಾರ್ಷಿಕ ಘೋಷಿತ ಆಸ್ತಿಯಲ್ಲಿ ಇಳಿಕೆಯನ್ನು ತೋರಿಸಿರುವ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ ಎಂದು ವರದಿ ಹೇಳಿದೆ.