Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರಿನಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌‌ಗಳು

ಬೆಂಗಳೂರು: ಖಾಸಗಿ ಬಸ್ ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಆರು ಬಸ್ ಗಳು ಹೊತ್ತಿ ಉರಿದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ.

ಖಾಸಗಿ ಬಸ್ ನಿಲ್ಲಿಸಿದ್ದ ಜಾಗದಲ್ಲಿ 10 ಬಸ್ ಗಳನ್ನು ನಿಲ್ಲಿಸಲಾಗಿತ್ತು. ಇಲ್ಲಿ ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ದು, ಈ ಸಂದರ್ಭ 6 ಬಸ್ ಗಳು ಬೆಂಕಿಗೆ ಆಹುತಿಯಾಗಿದೆ.

ಇನನು ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಹಿಂದೆ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.