Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲು – ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ರೈಲ್ವೆ ಸ್ಟೇಷನ್, ಏರ್​ಪೋರ್ಟ್​ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. 11 ರಾಜ್ಯಗಳ ಚುನಾವಣೆಯಲ್ಲಿ 3400 ಕೋಟಿ ರೂ. ಸೀಜ್ ಮಾಡಲಾಗಿದೆ. ಚುನಾವಣೆ ವೇಳೆ‌ ವಶಕ್ಕೆ‌ 3400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ.

ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದರು. ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಎಲ್ಲಾ ಕಡೆ ಚೆಕ್​ಪೋಸ್ಟ್ ಇರಲಿವೆ, ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ.

ಸಿಆರ್​ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್​ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು. ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್​ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.