Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮತ್ತೊಂದು ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ.!

 

ಬೆಂಗಳೂರು: ಈಗ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ (ನ.27) ರಾತ್ರಿ ಚಿಕ್ಕಜಾಲ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಶೂ ಮತ್ತು ಬಟ್ಟೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಮಳಿಗೆ ಹೊತ್ತಿ ಉರಿದಿದೆ. ಅಗ್ನಿ ಅವಘಡದಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ. ವಿದ್ಯುತ್​​​​ ಶಾರ್ಟ್ ಸರ್ಕ್ಯೂಟ್​​​​​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಕಾಣಿಸಿಕೊಳ್ಳತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿದೆ. ಅಗ್ನಿ ಶಾಮಕದಳ ಸಿಬ್ಬಂದಿ ಮಳಿಗೆಗೆ ಹೊತ್ತಿಕೊಂಡಿದ್ದ ಬೆಂಕಿ ನಂದಿಸಿದ್ದಾರೆ. ಕೆಲವು ವಸ್ತುಗಳು ಸುಟ್ಟು ಕರಕಲಾಗಿವೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.