Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮನೆಯಲ್ಲಿ ಸಿಲಿಂಡರ್ ಸ್ಫೋಟ – 8 ಮಂದಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನ ಯಲಹಂಕದ ಎಲ್‌ಬಿಎಸ್‌ನಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದಿಂದಾಗಿ ಒಬ್ಬರಿಗೆ 60% ರಷ್ಟು ಸುಟ್ಟಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಒಂದು ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಛಿದ್ರವಾಗಿದೆ. ಪಕ್ಕದ ನಾಲ್ಕು ಮನೆಗಳಿಗೂ ಹಾನಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಕಿಟಕಿಗಳು, ಬಾಗಿಲುಗಳು ಪೀಸ್ ಪೀಸ್ ಆಗಿವೆ ಎನ್ನಲಾಗಿದೆ.