Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!

ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಮತ್ತೋರ್ವ ಯುವಕನು ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕರ ಮಧ್ಯೆ ವೈಷಮ್ಯ ಅಥವಾ ಹುಡುಗಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಆದರೆ ಕೊಲೆಗೆ ನಿಖರ ಕಾರಣ ಏನೆಂದು ಇನ್ನು ತಿಳಿದು ಬಂದಿಲ್ಲ. ಕೊಲೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು ಯಾರೆಂದು ಪತ್ತೆ ಹಚ್ಚಬೇಕಾಗಿದೆ. ಹೀಗಾಗಿ ಪೊಲೀಸರ ತನಿಖೆ ನಂತರವೇ ಎಲ್ಲದಕ್ಕೂ ಉತ್ತರ ಸಿಗಲಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.