Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ

 

ಚಿತ್ರದುರ್ಗ: 2023-24ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ www.tw.kar.nic.in ವೆಬ್‍ಸೈಟ್‍ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು www.tw.kar.nic.in ಗೆ ಭೇಟಿ ನೀಡಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.