Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಯುಕೋ ಬ್ಯಾಂಕ್ 820 ಕೋಟಿ ಹಣ ವರ್ಗಾವಣೆ – ಮಂಗಳೂರು ಸೇರಿದಂತೆ ದೇಶದಾದ್ಯಂತ ಬ್ಯಾಂಕ್ ಮೇಲೆ ಸಿಬಿಐ ದಾಳಿ

ಮಂಗಳೂರು: ಯುಕೊ ಬ್ಯಾಂಕ್‌ನ ಖಾತೆಗಳಲ್ಲಿ 820 ಕೋಟಿ ರೂಪಾಯಿ ಮೌಲ್ಯದ ಐಎಂಪಿಎಸ್ ವ್ಯವಹಾರ ಅಕ್ರಮವಾಗಿ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ. ಕೋಲ್ಕತಾ ಮತ್ತು ಮಂಗಳೂರು ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಆರೋಪಿಗಳು ಮತ್ತು ಖಾಸಗಿ ವ್ಯಕ್ತಿ ಗಳು/ಬ್ಯಾಂಕ್ ಅಧಿಕಾರಿಗಳು ಸೇರಿ ದಂತೆ ಸಂಸ್ಥೆ ವಿಚಾರಣೆ, ಶೋಧ ನಡೆಸಿದೆ ಎಂದು ಸಿಬಿಐ ಪ್ರಕಟನೆ ತಿಳಿಸಿದೆ.

ಹುಡುಕಾಟದ ಸಮಯದಲ್ಲಿ ವಹಿವಾಟಿನ ಆರೋಪದ ಮೇಲೆ ಮೊಬೈಲ್ ಫೋನ್‌ಗಳು, ಲ್ಯಾಪ್ ಟಾಪ್‌ಗಳು, ಕಂಪ್ಯೂಟರ್ ಸಿಸ್ಟಮ್ ಗಳು, ಇಮೇಲ್ ಆರ್ಕೈವ್‌ಗಳು ಮತ್ತು ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪುರಾವೆಗಳನ್ನು ಪಡೆಯಲಾಗಿದೆ. ಯುಕೋ ಬ್ಯಾಂಕ್‌ನಿಂದ ಬಂದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ. ಈ ಬ್ಯಾಂಕ್‌ನ ಇಬ್ಬರು ಸಹಾಯಕ ಎಂಜಿನಿಯರ್ ಗಳು ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಅನುಮಾನಾಸ್ಪದ ತತ್ ಕ್ಷಣದ ಪಾವತಿ ಸೇವೆ (ಐಎಂಪಿಎಸ್) ಪ್ರಕರಣ ದಾಖಲಿಸಲಾಗಿದೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ ಗಳ 14,000 ಖಾತೆದಾರರಿಂದ ಐಎಂಪಿಎಸ್ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಚಾನಕ್ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.