Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಯುಗಾದಿ ಎಲ್ಲರಿಗೂ ಸಂತೋಷ, ಸಮೃದ್ಧಿ ಕರುಣಿಸಲಿ – ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ : ಇಂದು ನಾಡಿನಾದ್ಯಂತ ಸಂಭ್ರಮದಿಂದ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಯುಗಾದಿ ಹಬ್ಬಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಈ ಕುರಿತು “ಎಕ್ಸ್”ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭಾಶಯಗಳು. ಎಲ್ಲರಿಗೂ ಅಪರಿಮಿತ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷವನ್ನು ತರಲಿ ಎಂದು ಶುಭ ಹಾರೈಸಿದ್ದಾರೆ.